ಮದುವೆಯಾಗಿ ನಾಲ್ಕೇ 4 ತಿಂಗಳಲ್ಲಿ ಗಂಡ ಹೆಂಡತಿ ಆತ್ಮಹತ್ಯೆ
Views: 54
ಕನ್ನಡ ಕರಾವಳಿ ಸುದ್ದಿ: ನವ ವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಈ ದಂಪತಿ ಯಾಕೆ ಹೀಗೆ ಮಾಡಿಕೊಂಡಿದ್ದಾರೆ ಎಂಬುವ ನಿಖರ ಮಾಹಿತಿ ಯಾರಿಗೂ ತಿಳಿದಿಲ್ಲ. ಈ ಸಂಬಂಧದ ಕಾರಣ ಪೊಲೀಸರ ತನಿಖೆಯಿಂದಲೇ ಹೊರ ಬರಬೇಕಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡರೆ, ಹೊಲದಲ್ಲಿ ಪತಿ ನೇಣಿಗೆ ಶರಣಾಗಿದ್ದಾರೆ.
ಹನುಮನಹಳ್ಳಿಯ ಶರಣ್ಯ (20) ಮತ್ತು ಇವರ ಗಂಡ ಗಿರೀಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ನವ ದಂಪತಿ
ಶರಣ್ಯ ಮತ್ತು ಗಿರೀಶ್ ಇಬ್ಬರೂ ಕಳೆದ ನಾಲ್ಕು ತಿಂಗಳ ಹಿಂದೆ ಅಷ್ಟೇ ವಿವಾಹವಾಗಿದ್ದರು. ಸುಂದರ ಸಂಸಾರಕ್ಕಾಗಿ ನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದರು. ಇಬ್ಬರು ಹಲವು ಕನಸುಗಳೊಂದಿಗೆ ಹೊಸ ಜೀವನ ಕಟ್ಟಿಕೊಳ್ಳುತ್ತಿದ್ದರು. ಆದರೆ ಏನಾಗಿದೆಯೋ ಏನೋ ಗೊತ್ತಿಲ್ಲ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಪತ್ನಿ ಶರಣ್ಯ ನೇಣು ಬಿಗಿದುಕೊಂಡಿದ್ದಾರೆ.
ಶರಣ್ಯಯ ಗಂಡ ಗಿರೀಶ್ ಅವರು ಹೊಲದ ಹತ್ತಿರ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಈ ಇಬ್ಬರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆಯ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಅವರ ಮನೆ ಹಾಗೂ ಹೊಲದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಗಳ ಫೋಟೋ ತೆಗೆದುಕೊಂಡಿದ್ದಾರೆ.






