ರಾಜಕೀಯ
ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಗೌಡ ನಿಧನ
Views: 40
ಕನ್ನಡ ಕರಾವಳಿ ಸುದ್ದಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರಗೌಡ(88) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಚಂದ್ರಾಲೇಔಟ್ ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 6.30 ಕ್ಕೆ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆಂದು ವೈದ್ಯರು ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಶಿಕ್ಷಣ, ರೇಷ್ಮೆ ವಿಜ್ಞಾನ ತಂತ್ರಜ್ಞಾನ ಸಚಿವರಾಗಿ ಅವರು ಸೇವೆ ಸಲ್ಲಿಸಿದ್ದರು. ಇಂದು ಅವರ ಕಾಮಾಕ್ಷಿ ಪಾಳ್ಯದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.






