ಇತರೆ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಣ್ಣಾಮಲೈ

Views: 54

ಕನ್ನಡ ಕರಾವಳಿ ಸುದ್ದಿ : ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಉಡುಪಿ ಜಿಲ್ಲೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಹಾಗೂ ದೇಶದ ಸುಖ-ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿದರು. ದರ್ಶನದ ಬಳಿಕ ದೇವಳದ ವತಿಯಿಂದ ಶ್ರೀದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಣ್ಣಾಮಲೈ ಸಾಕಷ್ಟು ಸುದ್ದಿಯಲ್ಲಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅವರು, ಬಳಿಕ ‘ವಿ ದಿ ಲೀಡರ್ ಹೆಸರಿನ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸಿದ್ದಾರೆ.

ಈ ಚಳವಳಿಯು ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ರೂಪುಗೊಂಡು ತಮಿಳುನಾಡಿನ ರಾಜಕೀಯಕ್ಕೆ ಹೊಸ ಪರ್ಯಾಯವನ್ನು ನೀಡುವ ಉದ್ದೇಶ ಹೊಂದಿದೆ ಎಂದು ಅವರು ಇತ್ತೀಚೆಗೆ ಘೋಷಿಸಿದ್ದಾರೆ.

 

 

Related Articles

Back to top button
error: Content is protected !!