ಇತರೆ
ಲಿಫ್ಟ್‌ನಲ್ಲಿ ತಲೆ ಸಿಲುಕಿ ಯುವಕ ದಾರುಣ ಸಾವು
Views: 81
ಕನ್ನಡ ಕರಾವಳಿ ಸುದ್ದಿ: ಲಿಫ್ಟ್‌ನಲ್ಲಿ ತಲೆ ಸಿಲುಕಿದ ಪರಿಣಾಮ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿರುವುದು ನಗರದಲ್ಲಿ ನಡೆದಿದೆ. ಮೃತನನ್ನು ಧಾರವಾಡ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ. ಜಯನಗರದ ದಕ್ಷಿಣ ಉಪಹಾರ ಹೋಟೆಲ್‌ನಲ್ಲಿ ನಡೆದಿದೆ.
ರಾಜೇಶ್ ಲಿಫ್ಟ್ ಮೂಲಕ 2ನೇ ಮಹಡಿಗೆ ತೆರಳಲು ಮುಂದಾಗಿದ್ದರು. ತಲೆ ಹೊರಗೆ ಹಾಕಿದ್ದ ವೇಳೆ ಲಿಫ್ಟ್ ಏಕಾಏಕಿ ಮೇಲಕ್ಕೆ ಹೋಗಿದ್ದರಿಂದ ಲಿಫ್ಟ್ ಮತ್ತು ಗೋಡೆ ನಡುವೆ ತಲೆ ಸಿಲುಕಿದ್ದರಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.






