ಶಿಕ್ಷಣ
ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ
Views: 18
ಕನ್ನಡ ಕರಾವಳಿ ಸುದ್ದಿ: ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮವನ್ನು ಜುಲೈ 17ರಂದು ಹಮ್ಮಿಕೊಳ್ಳಲಾಗಿತ್ತು.
ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸುಸ್ಥಿರ ಸಮಾಜದ ರಚನೆಗೆ ಪ್ರೇರಣೆ ನೀಡುವ ಈ ಕಾರ್ಯಕ್ರಮವನ್ನು ಕುಂದಾಪುರ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಅನೂಪ್ ನಾಯಕ್ ರವರು ಉದ್ಘಾಟಿಸಿ ಮಾತನಾಡುತ್ತಾ – ಜನಸೇವೆಯೇ ಜನಾರ್ದನ ಸೇವೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಶಿಸ್ತು ಮತ್ತು ಸಂಯಮವನ್ನು ಪಾಲಿಸಿ, ಕಾನೂನು ವ್ಯವಸ್ಥೆ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ವಿದ್ಯಾರ್ಥಿ ಸಂಸತ್ತಿನಲ್ಲಿ ಕಲಿತ ಪಾಠ ಮುಂದೆ ಜೀವನದಲ್ಲಿಯೂ ಅಮೂಲ್ಯ ಪಾತ್ರವನ್ನು ವಹಿಸಬೇಕು. ಕಾನೂನು ವ್ಯವಸ್ಥೆಯನ್ನು ಕಾಪಾಡುವಲ್ಲಿ ಸಾಮಾನ್ಯರಿಗೆ ಪೊಲೀಸ್ ಅಂದರೆ ಭಯವಿರದೆ ಭರವಸೆ ಎಂಬ ಭಾವವಿರಬೇಕೆಂದರು.







