ಭೀಕರ ರಸ್ತೆ ಅಪಘಾತದಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಸಾವು: ಮತ್ತೋರ್ವ ಯುವಕ ಗಂಭೀರ
Views: 102
ಕನ್ನಡ ಕರಾವಳಿ ಸುದ್ದಿ: ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಗ್ರಾಮದ ಮಸೀದಿ ಸಮೀಪ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಳ್ಳಮಂಜ ದರ್ಜೆದಕೊಡಿ ನಿವಾಸಿ ರಾಮಣ್ಣ ಗೌಡ ಅವರ ಪುತ್ರ ಕೌಶಿಕ್ ಗೌಡ (19) ಎಂದು ಗುರುತಿಸಲಾಗಿದೆ. ಅವರು ಬಂಟ್ವಾಳದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು.
ಅಪಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮಡಂತ್ಯಾರು ಸಮೀಪದ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ (20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯರ ಪ್ರಕಾರ, ಅಪಘಾತ ಸಂಭವಿಸಿದ ಈ ಜಾಗವು ಅಪಘಾತ ವಲಯವಾಗಿ ಗುರುತಿಸಿಕೊಂಡಿದ್ದು. ಇಲ್ಲಿ ಈ ಹಿಂದೆ ಸಹ ಹಲವು ರಸ್ತೆ ಅಪಘಾತಗಳು ನಡೆದಿವೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.






