ಸ್ಯಾಂಡಲ್‍ವುಡ್ ನಟಿ ಐಶ್ವರ್ಯಾ ಸಿಂಧೋಗಿಗೆ ಅಶ್ಲೀಲ ಕಮೆಂಟ್..ಎಫ್‌ಐಆರ್ ದಾಖಲು
Views: 44
ಕನ್ನಡ ಕರಾವಳಿ ಸುದ್ದಿ: ಬೆಂಗಳೂರು:ಸ್ಯಾಂಡಲ್‍ವುಡ್ ನಟಿ ಐಶ್ವರ್ಯಾ ಸಿಂಧೋಗಿ ಅವರಿಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದು, ನಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ನಟಿ ಐಶ್ವರ್ಯಾ ಸಿಂಧೋಗಿ ಅವರ ಪೋಸ್ಟ್‌ಗಳಿಗೆ ಸತತವಾಗಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಲಾಗುತ್ತಿದೆಯಂತೆ. ಈ ಬಗ್ಗೆ ಸ್ವತಃ ಐಶ್ವರ್ಯಾ ಸಿಂಧೋಗಿ ಸಂಜಯ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬರ ಹೆಸರನ್ನು ಕೂಡ ಉಲ್ಲೇಖಿಸಿ ದೂರು ದಾಖಲಿಸಿದ್ದಾರೆ.
ಈ ಹಿಂದೆ ಕೂಡ ಇದೇ ವ್ಯಕ್ತಿ ಐಶ್ವರ್ಯಾಗೆ ಬೆದರಿಕೆ ಹಾಕಿದ್ದರು. ಆ ವೇಳೆ ಕೇಸ್ ದಾಖಲಾಗಿತ್ತು. ಈಗ ಅದೇ ವ್ಯಕ್ತಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ತಮಗೆ ತೊಂದರೆ ನೀಡುತ್ತಿರುವ ಆ ನಕಲಿ ಖಾತೆಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಐಶ್ವರ್ಯಾ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.






