ಇತರೆ

ಬಾಯಿಗೆ ಪ್ಲಾಸ್ಟರ್ ಅಂಟಿಸಿ, ಉಸಿರುಗಟ್ಟಿಸಿ ಇಬ್ಬರು ಮಕ್ಕಳು, ಹೆಂಡತಿ ಕೊಂದು ಪತಿ ಆತ್ಮಹತ್ಯೆ

Views: 169

ಕನ್ನಡ ಕರಾವಳಿ ಸುದ್ದಿ:ಇಬ್ಬರು ಮಕ್ಕಳು ಮತ್ತು ಹೆಂಡತಿಯನ್ನು ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.

ಹರೀಶ್ (49) ಪತ್ನಿ ನಿಶ್ಚಿತ (36) ಮತ್ತು 13 ಹಾಗೂ 6 ವರ್ಷದ ಮಕ್ಕಳು ಮೃತರೆಂದು ಗುರುತಿಸಲಾಗಿದೆ. ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಹರೀಶ್, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಈ ದುರಂತ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ತಮ್ಮ ತಾಯಿಯನ್ನು ಹರೀಶ್ ಅಜ್ಜಿ ಮನೆಗೆ ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕೊಲೆ ಮತ್ತು ಆತ್ಮಹತ್ಯೆಗೆ ನಿಖರ ಕಾರಣ ಈವರೆಗೆ ಗೊತ್ತಾಗಿಲ್ಲ.

ಸೋಮವಾರ ರಾತ್ರಿಯೇ ಈ ಘಟನೆ ನಡೆದಿರುವ ಶಂಕೆ ಇದೆ. ಇಂದು ಬೆಳಗ್ಗೆ ಎಷ್ಟೊತ್ತಾದರೂ ಮನೆ ಬಾಗಿಲು ತೆರೆಯದೇ ಇದ್ದಾಗ ಅಕ್ಕಪಕ್ಕದವರು, ಕಿಟಕಿ ಮೂಲಕ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Related Articles

Back to top button
error: Content is protected !!