ಇತರೆ
ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
Views: 59
ಕನ್ನಡ ಕರಾವಳಿ ಸುದ್ದಿ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಸಾವನ್ನಪ್ಪಿರುವ ಮಾಡಿಕೊಂಡಿರುವ ಘಟನೆ ತಾಲೂಕಿನ ಛತ್ರಕೋಡಿಹಳ್ಳಿ ಸಮೀಪ ನಡೆದಿದೆ.
ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಸುರೇಶ್ ಅವರ ಪತ್ನಿ ಪ್ರಮೀಳಾ (36), ಪುತ್ರಿ ಸ್ವಪ್ನ (22) ಹಾಗೂ ಪುತ್ರ ಚರಣ್ (18) ಮೃತರು.
ಮನೆಯಲ್ಲಿನ ಹಣಕಾಸಿನ ಸಮಸ್ಯೆ ಹಾಗೂ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕುಟುಂಬದಲ್ಲಿ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಸಾಲದ ಒತ್ತಡ ಮತ್ತು ಕೌಟುಂಬಿಕ ಕಲಹದಿಂದ ಮನನೊಂದ ಪ್ರಮೀಳಾ, ತಮ್ಮ ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೊರಬಂದು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ನಿಖರ ಕಾರಣ ಸೇರಿದಂತೆ ಪ್ರಕರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






