ಇತರೆ

ಪತ್ನಿಗೆ ಕಟ್ಟಿಗೆಯಿಂದ ಹಲ್ಲೆ ನಡೆಸಿ, ನೇಣು ಹಾಕಿ ಕೊಲೆ ಮಾಡಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತಿ!

Views: 40

ಕನ್ನಡ ಕರಾವಳಿ ಸುದ್ದಿ: ಬಾಗಲಕೋಟೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಕಟ್ಟಿಗೆಯಿಂದ ಹಲ್ಲೆ ನಡೆಸಿ, ನೇಣು ಹಾಕಿ ಕೊಲೆ ಮಾಡಿದ್ದಲ್ಲದೇ ವಿಡಿಯೋ ಮಾಡಿ ವಿಕೃತಿ ಮೆರೆದ ಅಮಾನವೀಯ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.

ಭಾಗ್ಯಶ್ರೀ (23) ಕೊಲೆಗೀಡಾದವರು. ಹಂತಕ ಪತಿ ಪ್ರವೀಣ ಜಗಳೂರು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಉಸಿರುಗಟ್ಟಿ ಸಾಯುತ್ತಿರುವ ವಿಡಿಯೋವನ್ನು ಆಕೆಯ ಗಂಡನೇ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ.

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯಿಂದ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ. ಆಕೆಯ ಪತಿ ಪ್ರವೀಣ್ ಜಗಳೂರು ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.

Related Articles

Back to top button
error: Content is protected !!