ಶಿಕ್ಷಣ
ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸ್ಕಾಟ್ ಚಿತ್ರ ಕಲಾ ರಚನಾ ಸ್ಪರ್ಧೆ
Views: 0
ಕನ್ನಡ ಕರಾವಳಿ ಸುದ್ದಿ: ವಕ್ಕಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಉಡುಪಿ ಜಿಲ್ಲಾಡಳಿತದ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲೆಯ ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಬಿಂಬಿಸುವ ಮಾಸ್ಕಾಟ್ ಚಿತ್ರಕಲಾ ರಚನಾ ಸ್ಪರ್ಧೆಯನ್ನು ಜುಲೈ 28ರಂದು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಲ್ಲಿ ಸ್ಥಳೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಿದ ಈ ಸ್ಪರ್ಧೆಯ ಆಶಯ ಉದ್ದೇಶವನ್ನು ಪ್ರಾಂಶುಪಾಲರಾದ ಡಾ. ರೂಪಾ ಶೆಣೈರವರು ವಿದ್ಯಾರ್ಥಿಗಳಿಗೆ ವಿವರಿಸಿದರು. ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರಕಲಾ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಚಿತ್ರಕಲಾ ಶಿಕ್ಷಕಿ ಕು.ನಿರೀಕ್ಷಾ ರವರು ಈ ಸ್ಪರ್ಧೆಯನ್ನು ಸಂಯೋಜಿಸಿದರು.






