ಇತರೆ

ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಮೀನುಗಾರರಿಗೆ ಎಚ್ಚರಿಕೆ!

Views: 43

ಕನ್ನಡ ಕರಾವಳಿ ಸುದ್ದಿ: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.

ಕರಾವಳಿ ತೀರದಲ್ಲಿ ಬಲವಾದ ಗಾಳಿ ಬೀಸುವುದರಿಂದ ಮೀನುಗಾರಿಗೆ ಸಮುದ್ರಕ್ಕೆ ಇಳಿಯದಂತೆ ತಿಳಿಸಿದ್ದು, ನಾಗರಿಕರಿಗೂ ಜಾಗರೂಕರಾಗಿರಲು ಸೂಚಿಸಲಾಗಿದೆ.

ಮುಂದಿನ 5 ದಿನಗಳ ಹವಾಮಾನ ಮುನ್ನೆಚ್ಚರಿಕೆ: ಸೂಚಿತ ಜಿಲ್ಲೆಗಳಲ್ಲಿ ಜುಲೈ 28ರಿಂದ ಆಗಸ್ಟ್ 2ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಬಿಡುಗಡೆ ಮಾಡಿದೆ.

ಜು. 28 ಜುಲೈ ರಿಂದ 29ರವರೆಗೆ ಉಡುಪಿಯಲ್ಲಿ ಅರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಜಿಲ್ಲಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಇದೆ ವೇಳೆಗೆ ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ.

ಜು. 29ರಿಂದ 30ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಎರಡೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅತ್ಯಂತ ಭಾರಿ ಮಳೆ ನಿರೀಕ್ಷಿಸಲಾಗಿದೆ.

ಜುಲೈ 30 ರಿಂದ 31ರವರೆಗೆ ಉಡುಪಿಯಲ್ಲಿ ಅರೆಂಜ್ ಅಲರ್ಟ್ ಮುಂದುವರೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಜುಲೈ 31ರಿಂದ ಆಗಸ್ಟ್ 1ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಎರಡೂ ಜಿಲ್ಲೆಗಳಿಗೆ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ.

Related Articles

Back to top button
error: Content is protected !!