ರಾಜಕೀಯ

ಶಾಸಕರ ಮನೆಯ 7ನೇ ಮಹಡಿಯಿಂದ ಬಿಜೆಪಿಯ ಮಾಜಿ ಸಚಿವ ಬಿದ್ದು ಸಾವು

Views: 77

ಕನ್ನಡ ಕರಾವಳಿ ಸುದ್ದಿ:  ಶಾಸಕರ ನಿವಾಸದ ಏಳನೇ ಮಹಡಿಯಿಂದ ಬಿದ್ದು ಮಾಜಿ ಸಚಿವರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಈ ಘಟನೆ ನಡೆದಿದೆ. ಮಾಜಿ ಸಚಿವ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ನಾಯಕ 55 ವರ್ಷದ ನಾನಕ್ ದೀನ್ ಭೂರ್ಜಿ ಶಾಸಕರ ನಿವಾಸದ ಏಳನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ತೀವ್ರವಾಗಿ ಗಾಯಗೊಂದಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಅವರು ಆಗಲೇ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ. ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆಯಿಂದ ಬಯಲಾಗಬೇಕಿದೆ.

Related Articles

Back to top button
error: Content is protected !!