ಇತರೆ

BREAKING NEWS: ಬಾರ್ಕೂರು‌ ಮೂಲದ ವ್ಯಕ್ತಿ ಕುಂದಾಪುರ ಚರ್ಚ್ ರಸ್ತೆಯಲ್ಲಿ ಶೂಟೌಟ್ 

Views: 625

ಕನ್ನಡ ಕರಾವಳಿ ಸುದ್ದಿ: ಬಾರ್ಕೂರು‌ ಮೂಲದ ವ್ಯಕ್ತಿಯನ್ನು ಕುಂದಾಪುರ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 3.30ರ ಹೊತ್ತಿಗೆ ಶೂಟೌಟ್ ನಡೆದಿದೆ.

ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಹತ್ಯೆಯಾದವರು.

ಉತ್ತಮ ವ್ಯವಹಾರಗಳನ್ನು ಮಾಡಿಕೊಂಡಿದ್ದ ಐವನ್ ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೆನ್ಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಹೋಲಿ ರೋಜರಿ ಚರ್ಚ್ ಎದುರಿಗೆ ಈ ಘಟನೆ ನಡೆದಿದೆ.ಆರೋಪಿಗಳು ಪರಾರಿಯಾಗಿದ್ದಾರೆ.

ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಭೇಟಿ ನೀಡಿದ್ದಾರೆ. ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಇನ್ಯಾವುದೋ ವ್ಯವಹಾರಕ್ಕೆ ಸಂಬಂಧಪಟ್ಟ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆ ವೇಳೆ ಅಂದಾಜಿಸಲಾಗಿದೆ.

 

Related Articles

Back to top button
error: Content is protected !!