ಶಿಕ್ಷಣ

ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ “ಬಂಧನ್ – ಫ್ಯಾಮಿಲಿ ಫನ್ ಡೇ” ಆಚರಣೆ

Views: 173

ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ “ಬಂಧನ್  ಫ್ಯಾಮಿಲಿ ಫನ್ ಡೇ” ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕುಟುಂಬದ ಬಾಂಧವ್ಯವನ್ನು ಬಲಪಡಿಸುವುದು ಹಾಗೂ ಮಕ್ಕಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ Fruits & Vegetables Day ಮತ್ತು Father’s Day Celebration ಅನ್ನು ಸಂಯೋಜಿಸಿದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಬಾಂಡ್ಯ ಎಜುಕೇಷನಲ್ ಟ್ರಸ್ಟ್‌ನ ಜಂಟಿ ವ್ಯವಸ್ಥಾಪಕ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್. ಶೆಟ್ಟಿಯವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ – ಹೂ ಮನಸ್ಸಿನ ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಕುಟುಂಬದ ಪಾತ್ರ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ತಂದೆಯರ ಪ್ರೋತ್ಸಾಹ ಅತೀ ಮಹತ್ವವನ್ನು ಮಹತ್ವವಾದುದು. ಶೈಕ್ಷಣಿಕ ಪರಿಸರದಲ್ಲಿ ಮಗು ಕಲಿಕಿಗೆ ತನ್ನನ್ನು ತೊಡಗಿಸಿಕೊಳ್ಳಬೇಕಾದರೆ ಪ್ರಾಥಮಿಕ ಹಂತದಲ್ಲಿ ತಂದೆ-ತಾಯಿಗಳ ಸೂಕ್ತ ಮಾರ್ಗದರ್ಶನ ಅತಿ ಅಗತ್ಯ ಎಂದರು.

ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಆಶಯ ಉದ್ದೇಶವನ್ನು ತಿಳಿಸಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ Dad Twinning ವಿಭಾಗದಲ್ಲಿ ತಂದೆ-ಮಕ್ಕಳು ಒಂದೇ ರೀತಿಯ ವೇಷಭೂಷಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಮನಗೆದ್ದರು. Family Master Chef ಸ್ಪರ್ಧೆಯಲ್ಲಿ ಪೋಷಕರು ಮತ್ತು ಮಕ್ಕಳು ಬೆಂಕಿಯ ಸಹಾಯವಿಲ್ಲದೆ ಹಣ್ಣು ಹಾಗೂ ತರಕಾರಿಗಳನ್ನು ಬಳಸಿ ಆರೋಗ್ಯಕರ ಮತ್ತು ಸೃಜನಾತ್ಮಕ ಆಹಾರಗಳನ್ನು ತಯಾರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಶಿಕ್ಷಕಿ ಶ್ರೀಮತಿ ಪ್ರೀತಿ ಶೆಟ್ಟಿ ಕಾರ್ಯಕ್ರಮ ನಿರ್ವಸಿದರು.

ಶ್ರೀಮತಿ ರೇಣುಕಾ ಸ್ವಾಗತಿಸಿ, ಶ್ರೀಮತಿ ಶುಭಾ ಲಕ್ಷ್ಮೀ ವಂದಿಸಿದರು.

Related Articles

Back to top button
error: Content is protected !!