ರಾಜಕೀಯ

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಅನುಮೋದನೆ

Views: 0

ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಲೋಕಾಯುಕ್ತ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ಪಡೆದುಕೊಂಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಸಚಿವ ಸಂಪುಟ ಸಭೆಯಲ್ಲಿ ಒಟ್ಟು 16 ವಿಷಯಗಳ ಮೇಲೆ ಚರ್ಚೆ ನಡೆದಿದೆ ಎಂದರು.

ಲೋಕಾಯುಕ್ತ ಪ್ರಕರಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ. ಎಂ ಎಚ್ ನಾಗೇಶ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ಕಡ್ಡಾಯ ನಿವೃತ್ತಿ ನೀಡಲು ಅನುಮೋದನೆ ನೀಡಲಾಯಿತು.

ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀರೋಗ ತಜ್ಞ ಡಾ. ಉಷಾ ಕದರ್ ಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀರೋಗ ತಜ್ಞ ಎಸ್ ಟಿ ನಾಗಮಣಿ ಅವರಿಗೆ ಕಡ್ಡಾಯ ನಿವೃತ್ತಿ ಎಂದು ಸಚಿವರು ತಿಳಿಸಿದ್ದಾರೆ.

ಪೋಕ್ಸೋ ಕಾಯ್ದೆ ಅಡಿ ಶಿಕ್ಷೆಗೆ ಗುರಿಯಾಗಿರುವ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಎನ್ ಹಳ್ಳಿಗುಡಿ ಅವರನ್ನು ಸರಕಾರಿ ಸೇವೆಯಿಂದ ವಜಾ ಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Related Articles

Back to top button
error: Content is protected !!