ಇತರೆ

ಬ್ರಹ್ಮಾವರ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಮಣೂರಿನ ವ್ಯಕ್ತಿ ಬಂಧನ

Views: 39

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಹಂದಾಡಿ ಗ್ರಾಮದ ಗುಡ್ಡಿ ಬಾರ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿ, ನಗದು ಸೇರಿದಂತೆ ಜುಗಾರಿ ಆಟಕ್ಕೆ ಬಳಸಲಾದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಮಣೂರು ಗ್ರಾಮದ ಕುಶಾಲ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಮಟ್ಕಾ ಜುಗಾರಿ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತಾಬಾಯಿ ಅವರು ಠಾಣಾ ಸಿಬ್ಬಂದಿ ಹಾಗೂ ಪಂಚರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿಯು ಸಾವರ್ಜನಿಕರನ್ನು ಕರೆದು ಮಟ್ಕಾ ಜುಗಾರಿ ಆಟದಲ್ಲಿ 00 ರಿಂದ 99 ರ ಒಳಗಿನ ನಂಬರ್‌ಗೆ 1 ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಹೇಳಿ ಜನರಿಂದ ಹಣವನ್ನು ಸಂಗ್ರಹಿಸಿ ಚೀಟಿಯಲ್ಲಿ ಬರೆಯುತ್ತಿರುವುದು ಕಂಡುಬಂದಿದ್ದು,

ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಟ್ಕಾ ಜುಗಾರಿ ನಡೆಸಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಒಂದು ಮಟ್ಕಾ ಚೀಟಿ, ಒಂದು ಬಾಲ್‌ಪೆನ್ ಹಾಗೂ ರೂ.2,395 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!