ರಾಜಕೀಯ

ಕೊನೆಯ ಕ್ಷಣದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಗಾಯತ್ರಿ ಶಾಂತಗೌಡಗೆ ತಪ್ಪಿದ ಮಂತ್ರಿಗಿರಿ!

Views: 56

ಕನ್ನಡ ಕರಾವಳಿ ಸುದ್ದಿ : ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಜಿಲ್ಲೆಯ ಜನತೆಗೆ ಅಚ್ಚರಿಯ ಜತೆಗೆ ನಿರಾಸೆಗೆ ಕಾರಣವಾಗಿದೆ.

ಸಚಿವಾಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೊನೆ ಕ್ಷಣದಲ್ಲಿ ಕೈಬಿಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಸೋಮವಾರ ಬೆಳಿಗ್ಗೆ ಎಐಸಿಸಿ ಬಿಡುಗಡೆಗೊಳಿಸಿದ ಇಪ್ಪತ್ತು ಮಂದಿ ಸಚಿವರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರಿತ್ತು. ಆದರೆ, ಮಧ್ಯಾಹ್ನ ಮೂರು ಗಂಟೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯಿಂದ ಇವರ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಇತ್ತೀಚೆಗೆ ಹೈಕೋರ್ಟ್ ನೀಡಿದ ಆದೇಶದಂತೆ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ವಿರುದ್ಧ ಒಂಬತ್ತು ಮತಗಳ ಅಂತರದಿಂದ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಪರಿಷತ್ ಸದಸ್ಯ ಸ್ಥಾನದ ಪ್ರಮಾಣವಚನ ಸ್ವೀಕರಿಸುವ ಮೊದಲೇ ಸಚಿವರ ಪಟ್ಟಿಯಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಪ್ರಕಟವಾಗಿತ್ತು.

ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ ಅವರನ್ನು ಪರಿಗಣಿಸದೆ ಗಾಯತ್ರಿ ಶಾಂತೇಗೌಡ ಅವರಿಗೆ ಮಣೆ ಹಾಕಲಾಗಿತ್ತು. ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಅನೇಕ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದರು. ಅಂತಿಮ ಕ್ಷಣದಲ್ಲಿ ಆದ ಬದಲಾವಣೆಯಿಂದ 20ರ ಬದಲು 19 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.

Related Articles

Back to top button
error: Content is protected !!