ಕರಾವಳಿ
ಕರಾವಳಿಯಲ್ಲಿ ಭಾರೀ ಮಳೆ: ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ
Views: 72
ಕನ್ನಡ ಕರಾವಳಿ ಸುದ್ದಿ: ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲೆಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ಮುಂಜಾಗ್ರತಾ ಕ್ರಮವಾಗಿ ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ, ಮುಲ್ಕಿ ತಾಲೂಕಿನ ಅಂಗನವಾಡಿಯಿಂದ ಹತ್ತನೇ ತರಗತಿಯವರೆಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಹಾಗೂ ಐಟಿಐ, ಡಿಫ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ.






