ಶಿಕ್ಷಣ

ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು: ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮೋಘ ಸಾಧನೆ

Views: 21

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಇವರು ಜಂಟಿಯಾಗಿ ಆಯೋಜಿಸಿದ ಬೈಂದೂರು ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆಯ 10 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಹಲವು ಪ್ರಶಸ್ತಿಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿರುತ್ತಾರೆ.

ಅಮೋಘ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ, ಪೋಷಕರು ಮತ್ತು ಊರಿನವರು ಅಭಿನಂದಿಸಿದ್ದಾರೆ.

Related Articles

Back to top button
error: Content is protected !!