ಇತರೆ

ರೆಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ 14ನೇ ಆರೋಪಿ ಹೇಳಿದ್ದೇನು? ದರ್ಶನ್‌ಗೆ ಮತ್ತೊಂದು ಶಾಕ್! 

Views: 97

ಕನ್ನಡ ಕರಾವಳಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ತಾನು ಸಂಪೂರ್ಣ ಸತ್ಯ ಬಹಿರಂಗಪಡಿಸುವುದಾಗಿ ಹೇಳಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ

ತನ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿರುವ ಪ್ರದೋಷ್, ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾನೆ. ಈ ಹೊಸ ಬೆಳವಣಿಗೆಯು ದರ್ಶನ್ ಹಾಗೂ ಗ್ಯಾಂಗ್‌ಗೆ ಮತ್ತೊಂದು ಶಾಕ್ ನೀಡಿದೆ.

ಪ್ರದೋಷ್ ಪರ ವಕೀಲರು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ಇರುವ ಕೊಠಡಿ ಬಿಟ್ಟು ತಮ್ಮನ್ನು ಪ್ರತ್ಯೇಕ ಜೈಲು ಕೊಠಡಿಯಿಂದ ಹಾಜರುಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ದರ್ಶನ್ ಬೆದರಿಕೆ ಹಾಕುವುದು ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಈ ಭದ್ರತಾ ಮನವಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಪ್ರಾಸಿಕ್ಯೂಷನ್ ತನ್ನ ನಿಲುವು ತಿಳಿಸುವಂತೆ ಸೂಚಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ (A1) ಆಗಿದ್ದರೆ, ನಟ ದರ್ಶನ್ ಎರಡನೇ ಆರೋಪಿ (A2) ಆಗಿದ್ದಾರೆ. ಈಗ ಪ್ರದೋಷ್ ಮಾಫಿ ಸಾಕ್ಷಿಯಾಗಲು ಮುಂದಾಗಿರುವುದು ನಟ ದರ್ಶನ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪ್ರದೋಷ್ ಹೇಳಿಕೆಗಳು ಈ ಪ್ರಕರಣದ ತನಿಖೆಯಲ್ಲಿ ನಿರ್ಣಾಯಕವಾಗಲಿದೆ.

Related Articles

Back to top button
error: Content is protected !!