ಯುವಜನ
ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ: ಕೊಲೆಯೋ..ಆತ್ಮಹತ್ಯೆಯೋ!?
Views: 172
ಕನ್ನಡ ಕರಾವಳಿ ಸುದ್ದಿ: ಯುವತಿಯರಿಬ್ಬರ ಶವ ಒಂದೇ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಲಹಂಕದಲ್ಲಿ ಈ ಘಟನೆ ನಡೆದಿದೆ. ನೇಪಾಳ ಮೂಲದ ಇಬ್ಬರು ಯುವತಿಯರ ಶವ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಬ್ಬರೂ ಒಂದೇ ಮರದಲ್ಲಿ ಒಂದೇ ಸೀರೆಯಿಂದ ನೇಣು ಬಿಗಿದುಕೊಂಡಂತೆ ಕಂಡುಬರುತ್ತಿದೆ.
ಇಂದು ಬೆಳಿಗ್ಗೆ ಸ್ಥಳೀಯರು ಇದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 20 ಹಾಗೂ 21 ವರ್ಷದ ಯುವತಿಯರಾಗಿದ್ದು, ಇದು ಕೊಲೆಯೋ, ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಯಲಹಂಕ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.






