ಮುದರಂಗಡಿ ಶೂಟೌಟ್ :ಬೈಂದೂರಿನ ಒತ್ತಿನೆಣೆಯಲ್ಲಿ ಬಸ್‌ನಿಂದ ಇಳಿದು ಓಡಿ ಹೋಗುವಾಗ ಮೂವರು ಸುಪಾರಿ ಹಂತಕರ ಬಂಧನ
Views: 216
ಕನ್ನಡ ಕರಾವಳಿ ಸುದ್ದಿ: ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಹಾಡಹಗಲೇ ನಡೆದ ಕೊಲೆ ಪ್ರಕರಣದಲ್ಲಿ ಉಡುಪಿ ಪೊಲೀಸರ ಕಾರ್ಯಾಚರಣೆಯಲ್ಲಿ ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದು ಕೆಲವೇ ಗಂಟೆಯೊಳಗೆ ಪೊಲೀಸರು ತಂಡವು ಎಲ್ಲಾ ಮೂವರು ಸುಪಾರಿ ಹಂತಕರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಉತ್ತರ ಪ್ರದೇಶದ ರಾಜು (42) ಉತ್ತರಾಖಂಡದ ರಾಜ್ಯದ ಅಜಯ್ ರಸ್ತೋಗಿ ಯಾನೆ ಅನ್ನೋಲ್ (23) ಮತ್ತು ಬಿಹಾರ ಆರೋಪಿಗಳನ್ನು ಉತ್ತರ ಪ್ರದೇಶದ ರಾಜು (42), ಉತ್ತರಾಖಂಡ ರಾಜ್ಯದ ಅಜಯ್ ರಸ್ತೋಗಿ ಯಾನೆ ಅನ್ನೋಲ್ (23) ಮತ್ತು ಬಿಹಾರ ರಾಜ್ಯದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಎಂದು ಗುರುತಿಸಲಾಗಿದೆ.
ಏನಿದು ಘಟನೆ? ಕಾಪು ತಾಲೂಕು ಮುದರಂಗಡಿಯ ಸೆಂಗ್ ಕ್ಷೇವಿಯರ್ ಚರ್ಚ್‌ನ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ (55) ಎಂಬವರು ಪ್ರಿನ್ಸ್ ಎಂಟರ್‌ಪ್ರೈಸಸ್ ಎಂಬ ಹೆಸರಿನ ಉದ್ಯಮದ ಕಚೇರಿ ಹೊಂದಿದ್ದು ಶುಕ್ರವಾರ ಕಚೇರಿಗೆ ಬಂದು ಬಳಿಕ ತನ್ನ ಥಾರ್ ವಾಹನದ ಬಳಿ ಹೋದಾಗ ದುಷ್ಕರ್ಮಿಯೊಬ್ಬ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿದ್ದ. ಬಳಿಕ ಆರೋಪಿಗಳು ಪರಾರಿಯಾಗಿದ್ದ.
ಮುದರಂಗಡಿಯಿಂದ ಬೈಕ್‌ನಲ್ಲಿ ಪರಾರಿಯಾಗಿದ್ದ ಆರೋಪಿಗಳು ಬೈಕನ್ನು ಎರ್ಮಾಳ್ ನಲ್ಲಿ ಬಿಟ್ಟು ಬಳಿಕ ಬಸ್ ಮೂಲಕ ಭಟ್ಕಳ ಕಡೆಗೆ ಹೋಗಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ ಪೊಲೀಸ್ ತಂಡವು ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಬಸ್ ನಿಲ್ಲಿಸಿ ತಪಾಸಣೆ ಮಾಡುವ ಸಮಯದಲ್ಲಿ ಆರೋಪಿಗಳು ಬಸ್‌ನಿಂದ ಇಳಿದು ಓಡಿಹೋಗಿದ್ದಾರೆ.
ಅವರನ್ನು ಬೆನ್ನಟ್ಟಿ ಹಿಡಿಯುವ ಸಮಯದಲ್ಲಿ ಪ್ರಮುಖ ಆರೋಪಿ ರಾಜು ಕಾಪು ಪೊಲೀಸ್ ಠಾಣಾ ಪಿ.ಎಸ್.ಐ. ತೇಜಸ್ವಿ ಇವರನ್ನು ದೂಡಿ ಹಾಕಿ, ಆತನ ಕೈಯ್ಯಲ್ಲಿದ್ದ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ಈ ವೇಳೆ ತೇಜಸ್ವಿ ಅವರು ಆತನ ಕಾಲಿಗೆ ಗುಂಡು ಹೊಡೆದು ಆತನನ್ನು ಮತ್ತು ಆತನ ವಶದಲ್ಲಿದ್ದ ಪಿಸ್ತೂಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಮೂಲದ ರಾಜು ಎಂಬಾತನೇ ಡೇವಿಡ್ ಡಿಸೋಜಾಗೆ ಗುಂಡು ಹಾರಿ ಕೊಲೆ ಮಾಡಿದ ಆರೋಪಿ. ಈತನ ವಿರುದ್ಧ ಪೊಲೀಸರಿಗೆ ಗುಂಡು ಹಾರಿಸಿ ಗಾಯಗೊಳಿಸಿದ ಬಗ್ಗೆ ಕೊಲೆ ಯತ್ನ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರಕರಣ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






