ಶಿವಗಂಗೆಗೆ ಟ್ರೆಕ್ಕಿಂಗ್ ಹೋದ ಯುವಕ ನಿಗೂಢ ನಾಪತ್ತೆ, ಶೋಧ ಕಾರ್ಯ ಚುರುಕು
Views: 21
ಕನ್ನಡ ಕರಾವಳಿ ಸುದ್ದಿ: ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ 31 ವರ್ಷದ ಯುವಕ ನಾಪತ್ತೆಯಾಗಿದ್ದು, ಹಲವು ಅನುಮಾನ ಮೂಡಿವೆ.
ಪ್ರತೀಕ್ ಉಪಾಧ್ಯಾಯ ನಾಪತ್ತೆಯಾದ ಯುವಕ. ಶುಕ್ರವಾರ ಬೆಳಿಗ್ಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಬಂದಿದ್ದ. ಬುಲೆಟ್ ಬೈಕ್ ಪಾರ್ಕಿಂಗ್ ಮಾಡಿ ಬೆಟ್ಟ ಏರಿದ್ದವ ಈಗ ನಾಪತ್ತೆಯಾಗಿದ್ದಾನೆ. 5 ದಿನಗಳ ಹಿಂದೆ ವೈಟ್‌ಫೀಲ್ಡ್‌ನಲ್ಲಿ ಬುಲೆಟ್ ಬೈಕನ್ನು ಬಾಡಿಗೆಗೆ ಪಡೆದಿದ್ದ. ಯುವಕ ನಾಪತ್ತೆ ಹಿನ್ನೆಲೆಯಲ್ಲಿ ಸಾಕಷ್ಟು ಅನುಮಾನಗಳು ಮೂಡಿವೆ. ಶುಕ್ರವಾರ ಬೆಳಿಗ್ಗೆ ಬೆಟ್ಟ ಹತ್ತುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೆ ವಾಪಸ್ ಆಗಿದ್ದಾನಾ, ಇಲ್ವ ಎಂಬ ಅನುಮಾನ ವ್ಯಕ್ತವಾಗಿದೆ. ಯುವಕನ ಫೋನ್ ಬೇರೆ ಕಡೆ ಸ್ವಿಚ್ ಆಫ್ ಆಗಿದೆ. ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ ನಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರೋನ್ ಕ್ಯಾಮೆರಾ ಬಿಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ಶಿವಗಂಗೆ ಬೆಟ್ಟ ಸಮುದ್ರದ ಮಟ್ಟದಿಂದ 4,800 ಅಡಿ ಎತ್ತರದಲ್ಲಿದೆ.ಮರಗಿಡಗಳು ಕಲ್ಲು ಬಂಡೆಗಳಿಂದ ಕೂಡಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.






