ಜನಮನ
BBMP ಕಚೇರಿಯಲ್ಲಿ ಬೆಂಕಿ ಅವಘಡ :ಚೀಫ್ ಇಂಜಿನಿಯರ್ ಸೇರಿ 9 ಮಂದಿಗೆ ಗಾಯ

Views: 0
ಬೆಂಗಳೂರು ಬಿಬಿಎಂಪಿ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತರಲು ಯಶಸ್ವಿಯಾಗಿದ್ದಾರೆ.
ಈ ಘಟನೆಯಲ್ಲಿ 9 ಮಂದಿ ಸಿಬ್ಬಂದಿಗೆ ಗಂಬೀರ ಗಾಯವಾಗಿದೆ. ಮುಖ್ಯ ಅಭಿಯಂತರ ಶಿವಕುಮಾರ್ ಅವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದ ಎಂಟು ಮಂದಿಗೆ ಮಾರ್ತಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ನಂತರ ವಿಕ್ಟೋರಿಯಾಗೆ ಕಳುಹಿಸಲಾಗಿದೆ.
ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎನ್ನುವುದು ಇನ್ನಷ್ಟೇ ತನಿಖೆಯಿಂದ ತಿಳಿಯಬೇಕಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಗ್ಯಾಸ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಂಜೆ 5:00 ರ ವೇಳೆಗೆ ಈ ಅವಘಡ ಸಂಭವಿಸಿದ್ದು, ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಬಿಬಿಎಂಪಿ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






