ಜನಮನ

ಮಂಗಳೂರು ವಿವಿ ಪ್ರಾಧ್ಯಾಪಕ ಡಾ. ಉದಯ ಬಾರ್ಕೂರು ನಿಧನ

Views: 0

ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಉದಯ ಬಾರ್ಕೂರು (59) ಅವರು ಶುಕ್ರವಾರ ಸಂಜೆ ನಿಧನರಾದರು.

ಮಂಗಳೂರು ವಿವಿಯಲ್ಲಿ ಕಳೆದ 34 ವರ್ಷಗಳಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಮುಖ್ಯಸ್ಥರಾಗಿ, ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್ ಆಗಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

2017ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾಧ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರು ರಾಷ್ಟ್ರೀಯ,ಅಂತರಾಷ್ಟ್ರೀಯ ಮತ್ತು ವಿಚಾರ ಸಂಕೀರ್ಣಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇತಿಹಾಸ ತಜ್ಞರಾಗಿ ಗುರುತಿಸಿಕೊಂಡಿದ್ದ ಇವರ ಮಾರ್ಗದರ್ಶನದಲ್ಲಿ ಅನೇಕ ವಿದ್ಯಾರ್ಥಿಗಳು ಪಿಎಚ್ ಡಿ ಪದವಿ ಪಡೆದುಕೊಂಡಿದ್ದಾರೆ.

ಇವರ ನಿಧನಕ್ಕೆ ಮಂಗಳೂರು ವಿವಿ ಕುಲಪತಿ, ಕುಲ ಸಚಿವರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Related Articles

Back to top button
error: Content is protected !!