ಇತರೆ

ಡೇವಿಡ್ ಶೂಟೌಟ್ ಪ್ರಕರಣ: ಹೆಚ್ಚಿನ ತನಿಖೆಗಾಗಿ ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿಗೆ

Views: 32

ಕನ್ನಡ ಕರಾವಳಿ ಸುದ್ದಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಉತ್ತರಾಖಂಡ ಮೂಲದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರ ಮೂಲದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಕಸ್ಟಡಿಗೆ ನೀಡಲಾದ ಆರೋಪಿಗಳು.

ಪ್ರಕರಣದ ತನಿಖಾಧಿಕಾರಿ, ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ಅವರ ನೇತೃತ್ವದ ಪೊಲೀಸ್ ತಂಡವು ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳನ್ನು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಪ್ರಕರಣದ ಆಳವಾದ ವಿಚಾರಣೆ ಹಾಗೂ ಹೆಚ್ಚಿನ ತನಿಖೆಯ ಅಗತ್ಯವಿರುವುದರಿಂದ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಧೀಶ ಪುರುಷೋತ್ತಮ ಅವರಲ್ಲಿ ಮನವಿ ಮಾಡಿಕೊಂಡರು.

Related Articles

Back to top button
error: Content is protected !!