ಇತರೆ

ನೀಟ್ ಮರು ಪರೀಕ್ಷೆ ಸಿದ್ಧತೆಯಲ್ಲಿದ್ದಾಗ ವಿದ್ಯಾರ್ಥಿನಿ ಆತ್ಮಹತ್ಯೆ: ಗಲ್ಫ್ ನಿಂದ ವಾಪಸಾಗಿ ಬಂದ ಸಹೋದರ ಶವವಾಗಿ ಪತ್ತೆ!

Views: 70

ಕನ್ನಡ ಕರಾವಳಿ ಸುದ್ದಿ: ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್‌ ಸೆಂಟರ್‌ವೊಂದರ ಹಾಸ್ಟೆಲ್ ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್ ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ವೊಂದರ ಕೋಣೆಯೊಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಆದರೆ ಅರ್ಜುನ್ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮಂಗಳೂರಿಗೆ ಆಗಮಿಸಿ ಹುಡುಕಾಟ ನಡೆಸಿದ್ದರಾದರೂ ಆತ ಪತ್ತೆಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಬಜಪೆ ಪೊಲೀಸ್‌ ಠಾಣೆ ವ್ಯಾಪ್ತಿಯ ಮರವೂರಿನ ಲಾಡ್ಜ್ ಒಂದರ ಕೋಣೆಯಲ್ಲಿ ಅರ್ಜುನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಒಂದೇ ಕುಟುಂಬದ ಇಬ್ಬರು ಯುವ ಮಕ್ಕಳು ಮೃತಪಟ್ಟಿರುವುದು ಕುಟುಂಬಸ್ಥರನ್ನು ಹಾಗೂ ಸ್ಥಳೀಯರನ್ನು ತೀವ್ರ ಶೋಕಸಾಗರದಲ್ಲಿ ಮುಳುಗಿಸಿದೆ.

ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಅಮ್ಮ ನನ್ನನ್ನು ಕ್ಷಮಿಸು, ಹಾಗೆಯೇ ಒಂದಿಬ್ಬರು ಸ್ನೇಹಿತರಿಗೆ ವಿಷಯ ತಿಳಿಸು ಎಂದು ಉಲ್ಲೇಖಿಸಲಾಗಿತ್ತು. ಘಟನೆಗೆ ನಿಖರ ಕಾರಣ ಏನೆಂಬುದರ ಕುರಿತು ಬಜಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

Related Articles

Back to top button
error: Content is protected !!