ಸಾಂಸ್ಕೃತಿಕ

ಚಿತ್ರ ನಟಿಯ ಸಹೋದರಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಆರೋಪಿ ಅರೆಸ್ಟ್

Views: 64

ಕನ್ನಡ ಕರಾವಳಿ ಸುದ್ದಿ: ಕನ್ನಡದ ಚಿತ್ರನಟಿಯ ಸಹೋದರಿಯನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ ಆರೋಪ ಹಾಗೂ ದೂರಿನ ಅನ್ವಯ ಇದೀಗ ರಾಘವೇಂದ್ರ ಎಂಬಾತನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ತನ್ನ ಇಚ್ಛೆಯ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ ಮತ್ತು ಕ್ರೆಡಿಟ್ ಕಾರ್ಡ್ ಬಳಸಿ ಸಾಲ ಕೂಡ ಪಡೆದಿದ್ದಾನೆ ಎಂದು ನಟಿಯ ಸಹೋದರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯಿಂದಲೂ ತಲಘಟ್ಟಪುರ ಠಾಣೆಯಲ್ಲಿ ಪ್ರತಿದೂರು ದಾಖಲಾಗಿದೆ. ನಟಿ ಹಾಗೂ ಆಕೆಯ ಸಹೋದರಿ, ನನ್ನ ಹಾಗೂ ನನ್ನ ತಾಯಿಗೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಯುವತಿ ಕೊಟ್ಟ ದೂರಿನಲ್ಲಿ ಏನಿದೆ?

ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಟಿಯ ಸಹೋದರಿ ಮತ್ತು ರಾಘವೇಂದ್ರ ನಡುವೆ ಸ್ನೇಹ ಬೆಳೆದು, ಅದು ವಿವಾಹ ಹಂತಕ್ಕೆ ಹೋಗಿತ್ತು. ಈ ವೇಳೆ, ತನ್ನನ್ನು ಮದುವೆಯಾಗುವುದಾಗಿ ರಾಘವೇಂದ್ರ ನಂಬಿಸಿ, ಕಡೆಗೆ ಇಚ್ಛೆಯ ವಿರುದ್ಧವಾಗಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಯುವತಿ ಕೊಟ್ಟ ದೂರಿನಲ್ಲಿ ಉಲ್ಲೇಖವಾಗಿದೆ. ಪ್ರಸ್ತುತ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಕೈಗೊಂಡಿದ್ದಾರೆ ಎಂದು ವರದಿಯಾಗಿದೆ,

Related Articles

Back to top button
error: Content is protected !!