ಇತರೆ
ಜೇನು ನೊಣಗಳ ದಾಳಿ ಬಾಲಕ ಸಾವು
Views: 32
ಕನ್ನಡ ಕರಾವಳಿ ಸುದ್ದಿ: ಜೇನು ನೊಣಗಳ ದಾಳಿಯಿಂದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ಈ ದುರಂತ ಸಂಭವಿಸಿದೆ. ನಿಶ್ಚಿತ್ (8) ಮೃತ ಬಾಲಕ. ಮನೆಯ ಹಿಂದಿನ ಬಾಳೆ ಗಿಡದಲ್ಲಿ ಜೇನಿನ ಗೂಡು ಇತ್ತು. ತಂದೆ ವೆಂಕಟೇಶ್ ಹಾಗೂ ಬಾಲಕ ನಿಶ್ಚಿತ್ ಮೇಲೆ ಕಡಜದ ಹುಳುಗಳು ದಾಳಿ ನಡೆಸಿದ್ದವು.
ಇಬ್ಬರನ್ನೂ ಹೆಗ್ಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ತಂದೆ-ಮಗನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ನಿಶ್ಚಿತ್ ಮೃತಪಟ್ಟಿದ್ದಾನೆ. ತಂದೆ ವೆಂಕಟೇಶ್ ಗೆ ಚಿಕಿತ್ಸೆ ಮುಂದುವರೆದಿದೆ.






