ಜನಮನ
ಬಸ್ -ವ್ಯಾನ್ ಡಿಕ್ಕಿ : ಒಂದೇ ಕುಟುಂಬದ 7 ಮಂದಿ ಮೃತ್ಯು

Views: 73
ಜೈಪುರ ಬಸ್ ಹಾಗೂ ವ್ಯಾನ್ ನಡುವಿನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ದಿಚ್ಚಾನ ಕುಚಮನ್ ಜಿಲ್ಲೆಯಲ್ಲಿ ನಡೆದಿದೆ.
ಕುಟುಂಬದವರು ವ್ಯಾನ್ ನಲ್ಲಿ ಮದುವೆ ಸಮಾರಂಭಕ್ಕೆ ಭಾಗವಹಿಸಲು ತೆರಳುತ್ತಿದ್ದ ವೇಳೆ ಈ ಅವಗಡ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸಮೀಪದ ಬಂಗಾರ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ರವಾನಿಸಲಾಗಿದೆ.






