80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ಮದರ್ ತೆರೆಸಾ ಶಿಕ್ಷಣ ಸಂಸ್ಥೆ
Views: 22
ಕನ್ನಡ ಕರಾವಳಿ ಸುದ್ದಿ: ಮದರ್ ತೆರೆಸಾ ಶಿಕ್ಷಣ ಸಂಸ್ಥೆ, ಶಂಕರನಾರಾಯಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಘೋಷದೊಂದಿಗೆ ಸಂಭ್ರಮದಿಂದ ಆರಂಭವಾಯಿತು.
ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಶಂಕರ ನಾರಾಯಣ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಶ್ರೀಯುತ ಯುನುಸ್. ಆರ್. ಗಡ್ಡೇಕರ್ ಇವರು ಆಗಮಿಸಿ ಧ್ವಜಾರೋಹಣಗೈದರು.
ಧ್ವಜಾರೋಹಣದ ಬಳಿಕ, ವಿದ್ಯಾರ್ಥಿಗಳಿಂದ ದೇಶಭಕ್ತಿಯ ಪ್ರತೀಕವಾಗಿ ನಡೆದ ಭವ್ಯ ಪಥ ಸಂಚಲನದ ಗೌರವರಕ್ಷೆಯನ್ನು ಸ್ವೀಕರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ಪ್ರಜೆಯೂ ತನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಲ್ಲಿ, ದೇಶದ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ಯಾವುದೇ ಸಂಶಯವಿಲ್ಲ”ಎಂದು ಹೇಳಿದರು.
ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕುಮಾರಿ ಮೇಘನಾ ಮಾತನಾಡಿದರು. 10ನೇ ತರಗತಿಯ ಅನಘ ಭಟ್ ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು,ಶಿಕ್ಷಕರು ಮತ್ತು ಶಿಕ್ಷಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಧ್ವಜಾರೋಹಣದ ನಂತರ, ಕಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಣೆ ಯೊಂದಿಗೆ ಏಕಪಾತ್ರಾಭಿನಯ, ಧ್ವಜದ ಮಾದರಿ ನಿರ್ಮಾಣ, ರಸಪ್ರಶ್ನೆ ಸ್ಪರ್ಧೆ,ಹಿರಿಯ ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಘೋಷಣೆ ಬರೆಯುವಿಕೆ, ಕೊಲಾಜ್ ಮೇಕಿಂಗ್, ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ, ದೇಶಭಕ್ತಿ ಗೀತೆ ಸ್ಪರ್ಧೆ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ಕೊಲಾಜ್ ಮೇಕಿಂಗ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಟೋಪಾಜ್ ರೂಬಿ,ಸಫಾಯರ್, ಎಮರೋಲ್ಡ್ ತಂಡ ಗಳು ಕ್ರಮವಾಗಿ ಪ್ರಥಮ,ದ್ವಿತೀಯ, ತೃತೀಯ, ಚತುರ್ಥ ಸ್ಥಾನವನ್ನು ಪಡೆದುಕೊಂಡರು. ನಂತರ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.
ಅತಿಥಿಗಳನ್ನು ಮುಖ್ಯ ಶಿಕ್ಷಕಿ ರೂಪ ಮಸ್ಕರೇನಸ್ ಸ್ವಾಗತಿಸಿದರೆ, ಉಪನ್ಯಾಸಕಿ ಸಹನ ನಿರೂಪಿಸಿದರು.ಮಕ್ಕಳ ಉತ್ಸಾಹ, ಶಿಕ್ಷಕರ ಮಾರ್ಗದರ್ಶನ ಮತ್ತು ಆಡಳಿತ ಮಂಡಳಿಯ ನೆರವಿನಿಂದ 80ನೇ ಸ್ವಾತಂತ್ರ್ಯ ಮಹೋತ್ಸವವು ಯಶಸ್ವಿಯಾಗಿ, ಅತ್ಯಂತ ವಿಜೃಂಭಣೆಯಿಂದ ಜರುಗಿತು.















