ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
Views: 77
ಕನ್ನಡ ಕರಾವಳಿ ಸುದ್ದಿ:” ಯಾವುದೇ ಸ್ವಾರ್ಥ ಉದ್ದೇಶಗಳಿಂದ ಪ್ರೇರಿತವಾಗದ ದೇಶಪ್ರೇಮ ನಮ್ಮ ಯುವ ಜನತೆಯದ್ದಾಗಬೇಕು. ಮುಂದಿನ ದಿನಗಳಲ್ಲಿ ನಿಷ್ಪಕ್ಷಪಾತವಾದ ಧೋರಣೆಯಿಂದ ದೇಶ ಕಟ್ಟುವಲ್ಲಿ ಎಲ್ಲರೂ ಮುನ್ನಡೆದರೆ ದೇಶದ ಶ್ರೇಷ್ಠತೆಯನ್ನು ಕಾಪಾಡಬಹುದು’ ಎಂದು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ ಕುಮಾರ ಶೆಟ್ಟಿಯವರು ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣಗೈದು ಕರೆ ನೀಡಿದರು.
ಹಲವು ಮೌಲ್ಯಯುತ ಸಂಘರ್ಷ, ತ್ಯಾಗಗಳಿಂದ ದೇಶಕ್ಕೆ ಲಭಿಸಿದ ಸ್ವಾತಂತ್ರ್ಯ ಸಮರ್ಥವಾಗಿ ಉಳಿಸಿಕೊಳ್ಳಬೇಕಾದರೆ ನಾವೆಲ್ಲರೂ ಉತ್ತಮ ವಿಚಾರಶಕ್ತಿಯಿಂದ ಎಲ್ಲ ಕ್ಷೇತ್ರಗಳಲ್ಲಿ ಹೊಸತನಕ್ಕಾಗಿ ತುಡಿಯುವ ಮನಸ್ಥಿತಿ ಬೆಳೆಸಿಕೊಳ್ಳಬೇಕೆಂದು ಕಾಲೇಜಿನ ಹಿರಿಯ ಉಪನ್ಯಾಸಕಿ ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈಯವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ತಿಳಿಸಿದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಂದೀಪ್ ಪೂಜಾರಿಯವರು ಧ್ವಜಾರೋಹಣ ಪ್ರಕ್ರಿಯೆಯನ್ನು ನಿರ್ದೇಶಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಮ್ ಶೆಟ್ಟಿಯವರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಯವರು ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲ ಬೋಧಕ- ಬೋಧಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದರು.







