ಇತರೆ

ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಕೌಟುಂಬಿಕ ಕಲಹ: ಪತ್ನಿ ಕೊಲೆ ಮಾಡಿದ ಪತಿ ನೇಣಿಗೆ ಶರಣು 

Views: 30

ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಸುಮಂತ್ ಜೈನ್ (32) ಹಾಗೂ ಆಕೆ ಹುಬ್ಬಳ್ಳಿ ಮೂಲದ ಪದ್ಮಾವತಿ. (29) ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾರುಣವಾಗಿ ಅಂತ್ಯ ಕಂಡಿದೆ.ಶುಕ್ರವಾರ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಪತಿ, ತಾನೂ ನೇಣಿಗೆ ಶರಣಾಗಿದ್ದಾನೆ.

ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದ ಜೋಡಿ ನಡುವೆ ಪದೇ ಪದೇ ಮನೆ ವಿಚಾರಕ್ಕೆ ಕಲಹ ನಡೆಯುತ್ತಿತ್ತು. ಕಳೆದ ರಾತ್ರಿ ಕೌಟುಂಬಿಕ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್ ಕೊಲೆ ಮಾಡಿದ್ದಾನೆ. ನಂತರ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಈ ಮನೆ ನನ್ನದು ನನ್ನದು ಎಂದು ಹೇಳುತ್ತಿರುವ ಪತ್ನಿ ಜೊತೆ ಜಗಳವಾಗುತ್ತಿದೆ. ನಾನು ಸಾಯುತ್ತಿದ್ದೇನೆ, ತನ್ನ ಪಿಎಫ್ (PF) ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ಹೇಳಿದ್ದಾನೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ

ಈ ಆಡಿಯೋ ಸಂದೇಶ ಕೇಳಿದ ತಕ್ಷಣವೇ ಪೊಲೀಸರಿಗೆ ಮತ್ತು ಸಂಬಂಧಿಕರಿಗೆ ಸುಮಂತ್ ತಾಯಿ ವಿಷಯ ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಜಗೋಪಾಲ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯುಡಿಆ‌ರ್ (UDR) ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!