ವಿಧಾನಸಭಾ ಚುನಾವಣೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ಸ್ಪರ್ಧೆ: ಪ್ರಣವಾನಂದ ಸ್ವಾಮೀಜಿ
Views: 15
ಕನ್ನಡ ಕರಾವಳಿ ಸುದ್ದಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ಸೊರಬದಲ್ಲಿ ಕಣಕ್ಕಿಳಿಯುತ್ತೇನೆ. ನನ್ನ ವಿರುದ್ದ ದ್ವೇಷ ಸಾಧಿಸುತ್ತಿರುವ ಮಧು ವಿರುದ್ಧ ಯಾವುದೇ ಪಕ್ಷ ಟಿಕೆಟ್ ನೀಡಿದರೂ ಸ್ಪರ್ಧಿಸುತ್ತೇನೆ ಎಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ನನ್ನನ್ನೂ ಒಳಗೊಂಡಂತೆ ಈಡಿಗ ಸಂಸ್ಥಾನದ ಏಳು ಸ್ವಾಮೀಜಿಗಳನ್ನೂ ಆಹ್ವಾನಿಸಲಾಗಿತ್ತು.
ಆದರೆ ಕಾರ್ಯಕ್ರಮಕ್ಕೆ ಒಂದು ದಿನ ಇರುವಾಗ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈಬಿಡಲಾಗಿದೆ. ಇದಕ್ಕೆ ಸಚಿವ ಮಧು ಬಂಗಾರಪ್ಪ ಕಾರಣ ಎಂದು ಆರೋಪಿಸಿದರು. ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡುವಂತೆ ಕೋರಿ ಹೈಕೋರ್ಟ್‌ಗೆ ಭಕ್ತರು ಅರ್ಜಿ ಸಲ್ಲಿಸಿದ್ದಾರೆ.
ಮಧು ಬಂಗಾರಪ್ಪ ಅವರ ಧೋರಣೆ ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಶುಕ್ರವಾರ ಬೆಳಿಗ್ಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲೂ ಉದ್ದೇಶಿಸಿದ್ದೇನೆ ಎಂದು ತಿಳಿಸಿದರು.






