ಇತರೆ
ಭಜನೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಮಹಿಳೆ ಕುತ್ತಿಗೆಯಿಂದ ಸರ ಕಳ್ಳತನ
Views: 41
ಕನ್ನಡ ಕರಾವಳಿ ಸುದ್ದಿ: ಭಜನೆ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ .
ಕಲ್ಯಾಣನಗರದ 5ನೇ ಕ್ರಾಸ್‌ನಲ್ಲಿರುವ ಪ್ರಾವಿಜನ್ ಸ್ಟೋರ್ ಮುಂಭಾಗ ನಿಂತಿದ್ದ ವೇಳೆ ಹೆಲ್ಮಟ್ ಧರಿಸಿ ಬೈಕ್‌ನಲ್ಲಿ ಬಂದ ಇಬ್ಬರು ಏಕಾಏಕಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಂತ್ರಸ್ತೆ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡ ಕಾರಣ ಸುಮಾರು 19 ಗ್ರಾಂ ತೂಕದ ಒಂದು ಎಳೆಯ ಸರವನ್ನು ಮಾತ್ರ ಕಿತ್ತುಕೊಂಡು ಆರೋಪಿಗಳು ಎಸ್ಕೆಪ್ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಳವಾದ ಚಿನ್ನದ ಸರದ ಮೌಲ್ಯ ಅಂದಾಜು 2.85 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.






