ಶಿಕ್ಷಣ

ಕ್ರೀಡಾ ಭಾರತಿ ಉಡುಪಿ ಜಿಲ್ಲೆ- ರಾಷ್ಟ್ರೀಯ ಕ್ರೀಡಾ ದಿನಾಚರಣೆ – ಕ್ರೀಡಾ ಬಾಂಧವ್ಯ 2026

Views: 13

ಕನ್ನಡ ಕರಾವಳಿ ಸುದ್ದಿ: ಕ್ರೀಡಾ ಭಾರತಿ ಉಡುಪಿ ಜಿಲ್ಲೆ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರತೀ ತಾಲೂಕಿನ ಅತ್ಯಂತ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು.

ಬೈಂದೂರು ತಾಲೂಕಿನ ಶ್ರೀ ಮೂಕಾಂಬಿಕಾ ದೇವಳದ  ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಶಿಕ್ಷಕರಾದ ಶ್ರೀ ಕರುಣಾಕರ ಶೆಟ್ಟಿ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾ ಭಾರತಿ ಪ್ರಾಂತ ಸಹ ಕಾರ್ಯದರ್ಶಿ ಶ್ರೀ ಪ್ರಸನ್ನ ಶೆಣೈ, ಮಂಗಳೂರು ವಿಭಾಗ ಸಹ ಸಂಯೋಜಕರಾದ ಶ್ರೀ ಲಿಂಗಯ್ಯ  ಕ್ರೀಡಾ ಭಾರತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಂಜುನಾಥ ಶೆಟ್ಟಿ , ಹೆಬ್ರಿ ತಾಲೂಕು ಅಧ್ಯಕ್ಷರಾದ ಶ್ರೀ ಸೀತಾನದಿ ವಿಠಲ ಶೆಟ್ಟಿ, ಕಾರ್ಯದರ್ಶಿ ಶ್ರೀ ವಿಜಯ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಅಧ್ಯಕ್ಷರಾದ ಶ್ರೀ ಶಿವಾನಂದ ಕಾಮತ್ , ಸದಸ್ಯರಾದ ಶ್ರೀ ಪುಷ್ಪರಾಜ್ ಹೆಗ್ಡೆ ಉಪಸ್ಥಿತರಿದ್ದರು.

Related Articles

Back to top button
error: Content is protected !!