ಇತರೆ

ಸರಕಾರಿ ಅನ್ನಭಾಗ್ಯ ಅಕ್ಕಿ ಹೆಸರಿನಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ: ಪ್ರಕರಣ ದಾಖಲು 

Views: 124

ಕನ್ನಡ ಕರಾವಳಿ ಸುದ್ದಿ: ಸರಕಾರಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪ ಮಾಡಿ ಗುಜರಿ ವ್ಯಾಪಾರಿಯೊಬ್ಬರಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಂಡ್ಮಿ ನಿವಾಸಿ ಗುಜರಿ ವ್ಯಾಪಾರಿ ಜಿ. ಮೊಹಮ್ಮದ್ ದೂರುದಾರರು. ಅವರಿಗೆ ಸಚಿನ್ ಕರೆ ಮಾಡಿ, ಎರಡು ಚೀಲ ಅಕ್ಕಿಯನ್ನು ನಿಮ್ಮ ಮನೆ ಅಂಗಳದಲ್ಲಿ ಇರಿಸಿರುವುದಾಗಿ ತಿಳಿಸಿದ್ದ ಬಳಿಕ ಮೊಹಮ್ಮದ್ ಅವರು ಮನೆಗೆ ಆಗಮಿಸಿದಾಗ ಸಚಿನ್ ರಿಕ್ಷಾದಲ್ಲಿ ಹಾಗೂ ನಾಗೇಂದ್ರ ಪುತ್ರನ್ ಮತ್ತು ಪ್ರದೀಪ್ ಬೈಕ್‌ನಲ್ಲಿ ಅಲ್ಲಿಗೆ ಬಂದಿದ್ದರು. ಈ ಸಂದರ್ಭ ನಾಗೇಂದ್ರ ಪುತ್ರನ್ ತಾನು ಸಾಮಾಜಿಕ ಕಾರ್ಯಕರ್ತನೆಂದು ಪರಿಚಯಿಸಿಕೊಂಡು ಮನೆಯ ಅಂಗಳದಲ್ಲಿದ್ದ ಅಕ್ಕಿ ಚೀಲಗಳ ದೃಶ್ಯವನ್ನು ಚಿತ್ರೀಕರಿಸಿರುವುದಾಗಿ ಹೇಳಿದ್ದಾನೆ. ಸರಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ದೂರು ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಪ್ರಕರಣದಿಂದ ತಪ್ಪಿಸಿಕೊಳ್ಳಬೇಕಾದರೆ 2 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಅನಂತರ 1 ಲಕ್ಷ ರೂ. ನೀಡಬೇಕು. ಇಲ್ಲವಾದರೆ ಜನರನ್ನು ಹಾಗೂ ತನ್ನ ಹುಡುಗರನ್ನು ಕರೆಸಿ ಹೊಡೆದು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ವಿವರಿಸಲಾಗಿದೆ. ದೂರಿನಲ್ಲಿ ಮೊಹಮ್ಮದ್ ಅವರ ಮಕ್ಕಳು ಸ್ಥಳಕ್ಕೆ ಆರೋಪಿಗಳು ಆಗಮಿಸಿದಾಗ ಸ್ಥಳದಿಂದ ಪರಾರಿಯಾದರು ಎಂದೂ ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!