ಕಾಲೇಜು ವಿದ್ಯಾರ್ಥಿ ಅಪಹರಣ, ಹಲ್ಲೆ ಆರೋಪ, ಸ್ಯಾಂಡಲ್ವುಡ್ ಖ್ಯಾತ ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ದೂರು ದಾಖಲು
Views: 52
ಕನ್ನಡ ಕರಾವಳಿ ಸುದ್ದಿ: ಸ್ಯಾಂಡಲ್ವುಡ್ ಖ್ಯಾತ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.
ಬಳಿಕ ಪಟ್ಟಣಗೆರೆಯ ಮುಖ್ಯ ರಸ್ತೆಯ ಕಡೆಗೆ ಕಾರನ್ನು ಚಲಾಯಿಸಿಕೊಂಡು ಹೋಗಿ, ಚಲಿಸುತ್ತಿದ್ದ ಕಾರಿನಲ್ಲೇ ಮನೀಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಸಾಮ್ರಾಟ್ ವಿಜಯ್ ಹಾಗೂ ಆತನ ಸ್ನೇಹಿತರು ಮನೀಶ್ನ ಮುಖ, ಕುತ್ತಿಗೆ, ಎದೆ ಹಾಗೂ ತಲೆಯ ಭಾಗಕ್ಕೆ ತೀವ್ರವಾಗಿ ಹಲ್ಲೆ ನಡೆಸಿ, ನಡುರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಮನೀಶ್ ಗೌಡ ಪೊಲೀಸ್ ಠಾಣೆಗೆ ತೆರಳಿ ಸಾಮ್ರಾಟ್ ವಿಜಯ್ ಹಾಗೂ ಆತನ ಸ್ನೇಹಿತರ ವಿರುದ್ಧ ಅಪಹರಣ ಮತ್ತು ಹಲ್ಲೆ ನಡೆಸಿದ ಆರೋಪದಡಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ
ಏನಿದು ಪ್ರಕರಣ
ಬೆಂಗಳೂರಿನ ಕಾಲೇಜ್’ವೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮ್ರಾಟ್ ವಿಜಯ್ ಸೋಮವಾರ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅದೇ ಕಾಲೇಜಿನ ವಿದ್ಯಾರ್ಥಿ ಮನೀಶ್ ಗೌಡ ಹಾಗೂ ಆತನ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಸಾಮ್ರಾಟ್ ಕಾರನ್ನು ಓವರ್ಟೇಕ್ ಮಾಡಿದ್ದಾರೆ.
ಈ ವಿಚಾರವೇ ಬಳಿಕ ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸುಮಾರಿಗೆ ಮನೀಶ್ ಗೌಡ ಆರ್ವಿ ಕಾಲೇಜು ಆವರಣದಲ್ಲಿ ತಮ್ಮ ಬೈಕ್ ಪಾರ್ಕ್ ಮಾಡುತ್ತಿದ್ದ ವೇಳೆ ಕಾರಿನಲ್ಲಿ ಗ್ಯಾಂಗ್ ಸಮೇತ ಬಂದ ಸಾಮ್ರಾಟ್ ವಿಜಯ್, ಮನೀಶ್ನನ್ನು ಬಲವಂತವಾಗಿ ಅಪಹರಿಸಿದ್ದಾರೆ.






