ಸಾಂಸ್ಕೃತಿಕ

ದುನಿಯಾ ವಿಜಯ್–ನಾಗರತ್ನ ದಾಂಪತ್ಯ ಅಂತ್ಯ: 2ಕೋಟಿ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

Views: 85

ಕನ್ನಡ ಕರಾವಳಿ ಸುದ್ದಿ: ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಮನವಿಗೆ ಹೈಕೋರ್ಟ್ ಅಸ್ತು ಎಂದಿದೆ.

ಈ ಸಂಬಂಧ ದುನಿಯಾ ವಿಜಯ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್.ಶಾಂತಿಭೂಷಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಪ್ರಕಟಿಸಿದೆ.

ವಿಜಯ್ ಅವರು ವಿಚ್ಛೇದನ ಹೊಂದುತ್ತಿರುವ ಪತ್ನಿ ನಾಗರತ್ನ ಅವರಿಗೆ ಮೂರು ತಿಂಗಳ ಒಳಗಾಗಿ ರೂ.2 ಕೋಟಿ ಪರಿಹಾರ ನೀಡುವಂತೆ ನ್ಯಾಯಪೀಠ ಆದೇಶಿಸಿದೆ.

ದುನಿಯಾ ವಿಜಯ್ 1999ರಲ್ಲಿ ನಾಗರತ್ನ ಅವರನ್ನು ಮದುವೆಯಾಗಿದ್ದರು.2016ರಲ್ಲಿ ನಟಿ ಕೀರ್ತಿ ಜತೆ 2ನೇ ಮದುವೆಯಾಗಿದ್ದರು. ಅಂತೆಯೇ, ನಾಗರತ್ನ ಅವರಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೌಟುಂಬಿಕ ನ್ಯಾಯಾಲಯ ಈ ಅರ್ಜಿಯನ್ನು 2024ರಲ್ಲಿ ವಜಾ ಮಾಡಿತ್ತು.

ಇದನ್ನು ಪ್ರಶ್ನಿಸಿ ದುನಿಯಾ ವಿಜಯ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

Related Articles

Back to top button
error: Content is protected !!