ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ಯಾಂಗ್!
Views: 90
ಕನ್ನಡ ಕರಾವಳಿ ಸುದ್ದಿ:ಮನೆವೊಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿದೆ.
ಗೌರಿಬಿದನೂರು ನಗರದ ಕರೇಕಲ್ಲಹಳ್ಳಿ ಪ್ರದೇಶದ ಮನೆಯೊಂದನ್ನು ಎಳನೀರು ವ್ಯಾಪಾರ ನಡೆಸುವುದಾಗಿ ಹೇಳಿ ಬಾಡಿಗೆಗೆ ಪಡೆದುಕೊಂಡು, ಕಳೆದ ಕೆಲವು ದಿನಗಳಿಂದ ಅಕ್ರಮ ಚಟುವಟಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮನೆಯ ಮೇಲೆ ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕೊಡಿಗೇನಹಳ್ಳಿಯ ಶಶಿಕುಮಾರ್ (23), ಆಂಧ್ರಪ್ರದೇಶದ ಅಮರಾಪುರದ ಕವಿತಾಬಾಯಿ (31), ಗುಂಡಾಪುರದ ಆಯುಷ್ಯ (25) ಹಾಗೂ ಮಂಚೇನಹಳ್ಳಿಯ ರೇಷ್ಮಾ (41) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮ ಎಂಬ ಮಹಿಳೆ ಪರಾರಿಯಾಗಿದ್ದು, ಆಕೆಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮನೆ ಬಾಡಿಗೆಗೆ ನೀಡುವ ಮುನ್ನ ಬಾಡಿಗೆದಾರರ ಕುರಿತು ಸೂಕ್ತ ಪರಿಶೀಲನೆ ನಡೆಸುವ ಅಗತ್ಯವಿದೆ ಎಂಬುದನ್ನು ಈ ಘಟನೆ ಮತ್ತೊಮ್ಮೆ ಎತ್ತಿ ತೋರಿಸಿದೆ.
ದಾಳಿಯಲ್ಲಿ ವೃತ್ತ ನಿರೀಕ್ಷಕ ಅಂಜನ್ ಕುಮಾರ್, ನಗರ ಠಾಣೆಯ ಪಿಎಸ್ಐ ವರಲಕ್ಷ್ಮಿ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.






