ಇತರೆ

ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸಿನಿಮಾ ನಿರ್ಮಾಪಕರು, ರಾಜಕಾರಣಿಗಳ ಹೆಸರು ಹೇಳಿ ವಂಚನೆ: ಇಬ್ಬರ ಬಂಧನ

Views: 11

ಕನ್ನಡ ಕರಾವಳಿ ಸುದ್ದಿ: ಸಿನಿಮಾ ನಿರ್ಮಾಪಕರು, ರಾಜಕೀಯ ನಾಯಕರು ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಪರಿಚಯವಿದ್ದಾರೆ ಎಂದು ನಂಬಿಸಿ ಜಮೀನಿನ ಸಮಸ್ಯೆ ಬಗೆಹರಿಸಿಕೊಡುವುದಾಗಿ ಹಾಗೂ ಸಿನಿಮಾ ಗಳಲ್ಲಿ ಚಾನ್ಸ್ ಕೊಡುವುದಾಗಿ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಜಮೀನಿನ ಸಮಸ್ಯೆ ಬಗೆಹರಿಸಿಕೊಡುವುದಾಗಿ ಅಥವಾ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಮಾತುಕತೆಗೆ ಲಾಡ್ಜ್‌ಗಳಿಗೆ ಕರೆಯಿಸುತ್ತಿದ್ದರು.

ಬಂಧಿತರನ್ನು ಸಂತೋಷ್ (34) ಮತ್ತು ಪುನೀತ್ ಕುಮಾರ್ (25) ಎಂದು ಗುರುತಿಸಲಾಗಿದೆ. ಬಂಧಿತ ರಿಂದ ಸುಮಾರು 19 ಲಕ್ಷ ರು. ಮೌಲ್ಯದ 130 ಗ್ರಾಂ ಚಿನ್ನಾಭರಣ/ಗಟ್ಟಿ ಹಾಗೂ 1 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ. ಜುಲೈ 11ರಂದು ಗೊಲ್ಲರಹಟ್ಟಿಯ ನಿವಾಸಿಯೊಬ್ಬರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿನಿಮಾ ನಿರ್ಮಾಪಕರು ಪರಿಚಯವಿದ್ದಾರೆ ಎಂದು ಸುಳ್ಳು ಹೇಳಿ, ಜಮೀನಿನ ಸಮಸ್ಯೆ ಬಗೆಹರಿಸುವುದಾಗಿ ಯಶ ವಂತಪುರ ರೈಲ್ವೆ ನಿಲ್ದಾಣದ ಹತ್ತಿರವಿರುವ ಲಾಡ್ಜ್‌ಗೆ ಕರೆಯಿಸಿಕೊಂಡಿದ್ದರು. ಈ ವೇಳೆ, ಮಹಿಳೆ ಹ್ಯಾಂಡ್ ಬ್ಯಾಗ್‌ನಲ್ಲಿಟ್ಟಿದ್ದ ಆಕೆಯ ಮಾಂಗಲ್ಯ ಸರವನ್ನು ಕಳವು ಮಾಡಿ ಪರಾರಿಯಾಗಿದ್ದರು. ಈ ಕುರಿತು ಯಶವಂತ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀ ಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಂಧನದಿಂದ ಯಶವಂತಪುರ, ಕೆಂಗೇರಿ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 3 ಕಳವು ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

 

Related Articles

Back to top button
error: Content is protected !!