ಯುವಜನ

ಪ್ರಿಯಕರನ ಬೇಡಿಕೆಯಂತೆ ದುಬಾರಿ ಬೈಕ್ ಕೊಡಿಸಲು ಮನೆಯಲ್ಲಿಯೇ ಆಭರಣ ಕದ್ದು ಸಿಕ್ಕಿಬಿದ್ದ ಪ್ರಿಯತಮೆ! 

Views: 16

ಕನ್ನಡ ಕರಾವಳಿ ಸುದ್ದಿ: ಪ್ರಿಯಕರನಿಗೆ ದುಬಾರಿ ಬೈಕ್ ಕನಸನ್ನು ನನಸು ಮಾಡಲು ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲೇ 72 ಗ್ರಾಂ ಚಿನ್ನದ ಆಭರಣಗಳನ್ನು ಕದ್ದು ಸಿಕ್ಕಿಬಿದ್ದಿರುವ ಘಟನೆ ತಮಿಳುನಾಡಿನ ಪೊಲ್ಲಾಚಿಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಯುವತಿ ತನ್ನ ಪ್ರಿಯಕರನಿಗೆ ದುಬಾರಿ ‘ಕೆಟಿಎಂ’ (KTM) ಬೈಕ್ ಕೊಡಿಸುವ ಉದ್ದೇಶದಿಂದ ಮನೆಯಲ್ಲಿದ್ದ ಸುಮಾರು 72 ಗ್ರಾಂ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾಳೆ. ಬಳಿಕ ಆ ಒಡವೆಗಳನ್ನು ಮಾರಿ ಬಂದ ಹಣದಿಂದ ಪ್ರಿಯಕರನಿಗೆ ಬೈಕ್ ಖರೀದಿಸಿಕೊಟ್ಟಿದ್ದಳು.

ಮನೆಯಲ್ಲಿ ಚಿನ್ನಾಭರಣ ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು ಯುವತಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾಳೆ.

ಪ್ರಸ್ತುತ ಯುವತಿಯನ್ನು ಬಂಧಿಸಿರುವ ಪೊಲೀಸರು, ಘಟನೆಯ ಬಳಿಕ ತಲೆಮರೆಸಿಕೊಂಡಿರುವ ಆಕೆಯ ಪ್ರಿಯಕರನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಬೈಕ್ ಹಾಗೂ ಕಳುವಾದ ಚಿನ್ನದ ಪತ್ತೆಗೂ ಕ್ರಮ ಕೈಗೊಳ್ಳಲಾಗಿದೆ.

Related Articles

Back to top button
error: Content is protected !!