ಇತರೆ

ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗುವುದಾಗಿ ಪತ್ರ ಬರೆದಿಟ್ಟು ಯುವತಿ ನಾಪತ್ತೆ

Views: 61

ಕನ್ನಡ ಕರಾವಳಿ ಸುದ್ದಿ:ಉಡುಪಿ ನಗರದ ಕಿನ್ನಿಮುಲ್ಕಿ ವೇಗಸ್ ಟೌನ್‍ಶಿಪ್‍ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗುತ್ತಿದ್ದು ತನ್ನನ್ನು ಹುಡುಕಬೇಡಿ ಎನ್ನುವ ಪತ್ರ ಬರೆದಿಟ್ಟು ಸೆಪ್ಟಂಬರ್ 6 ರಂದು ಮಧ್ಯರಾತ್ರಿ ಅವಧಿಯಲ್ಲಿ ಮನೆಯಿಂದ ಕಾಣೆಯಾಗಿದ್ದಾರೆ.

4 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂ:0820-2520444, ಉಡುಪಿ ಕಂಟ್ರೋಲ್ ರೂಂ: 0820-2526444, ಪೊಲೀಸ್ ನಿರೀಕ್ಷಕರು 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Back to top button
error: Content is protected !!