ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಜ್ಯೋತಿಷಿ ನಿರಂಜನ್ ಭಟ್ ಸೇರಿದಂತೆ ಆರೋಪಿಗಳ ಮೇಲೆ ಜೈಲಿನಲ್ಲಿಯೇ ಮಾರಣಾಂತಿಕ ಹಲ್ಲೆ!
Views: 172
ಕನ್ನಡ ಕರಾವಳಿ ಸುದ್ದಿ: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜ್ಯೋತಿಷಿ ನಿರಂಜನ್ ಭಟ್ ಕ್ಯಾರಂ ಬೋರ್ಡ್, ಸ್ಟೀಲ್ ಡ್ರಮ್ ಮತ್ತು ಪೈಪ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ 5 ಲಕ್ಷ ರೂ. ಸುಲಿಗೆಗೆ ಯತ್ನಿಸಿದ್ದ ಪ್ರಕರಣದ 14 ಮಂದಿಯ ವಿರುದ್ಧದ ಆರೋಪ ಮಂಗಳೂರಿನ ತ್ವರಿತಗತಿ ನ್ಯಾಯಾಲಯದಲ್ಲಿ ಸಾಬೀತಾಗಿದೆ.
2017ರ ಸೆ.11ರಂದು ಮಧ್ಯಾಹ್ನ 12:30ಕ್ಕೆ ಮಂಗಳೂರಿನ ಜಿಲ್ಲಾ ಕಾರಾಗೃಹದ ಹೊಸ ಕಟ್ಟಡದ ಬಿ ಬ್ಲಾಕ್ ವರಾಂಡದಲ್ಲಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾ ಕೈದಿಗಳಾದ ನವನೀತ ಶೆಟ್ಟಿ ಹಾಗೂ ನಿರಂಜನ್ ಭಟ್ ತಮ್ಮ ಕೇಸಿನ ಮುಂದಿನ ವಿಚಾರಣಾ ದಿನಾಂಕ ತಿಳಿಯಲು ಜೈಲರ್ ಕಚೇರಿಯತ್ತ ತೆರಳುತ್ತಿದ್ದಾಗ ಈ ದಾಳಿ ನಡೆದಿತ್ತು.
ಹಣ ಗಳಿಸುವ ದುರುದ್ದೇಶದಿಂದ ಸಂಚು ರೂಪಿಸಿದ್ದ ಜೈಲಿನಲ್ಲಿದ್ದ ಕೈದಿಗಳ ಗ್ಯಾಂಗ್ ಇವರ ಮೇಲೆ ಹಲ್ಲೆ ನಡೆಸಿತ್ತು. ಅಂದರೆ ಆರೋಪಿಗಳು ನವನೀತ ಶೆಟ್ಟಿ ಹಾಗೂ ನಿರಂಜನ್ ಭಟ್‌ಗೆ ಕೈ ಮತ್ತು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಲ್ಲದೆ ನವನೀತ ಶೆಟ್ಟಿಗೆ ಪೈಪ್‌ನಿಂದ ತಲೆ ಮತ್ತು ಬೆನ್ನಿಗೆ ಹೊಡೆದು ಗಾಯಗೊಳಿಸಿದ್ದರು ಎಂದು ಆರೋಪಿಸಲಾಗಿತ್ತು.
ಈ ವೇಳೆ ಬಿಡಿಸಲು ಹೋದ ಜೈಲಿನ ಭದ್ರತಾ ಸಿಬ್ಬಂದಿಯ ಸಮವಸ್ತ್ರ ಹಿಡಿದು ಎಳೆದಾಡಿ, ಸರಕಾರಿ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದರು. ಹಲ್ಲೆ ನಡೆಸುತ್ತಿದ್ದ ಸಂದರ್ಭ ಆರೋಪಿಗಳು ಭಾಸ್ಕರ ಶೆಟ್ಟಿ ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳಬೇಕು ಇಲ್ಲದಿದ್ದರೆ 5 ಲಕ್ಷ ರೂ. ಹಣ ತರಿಸಿ ಕೊಡಬೇಕು ಎಂದು ಒತ್ತಾಯಿಸಿ ಜೀವ ಬೆದರಿಕೆ ಹಾಕಿದ್ದರು.
ಈ ಕುರಿತು ಬರ್ಕೆ ಠಾಣಾ ಪೊಲೀಸರು ಐಪಿಸಿ ಸೆಕ್ಷನ್ 120(ಆ), 143, 147, 148, 341, 323, 324, 384, 506, 307, 353 3 14908 ಪ್ರಕರಣ ದಾಖಲಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.
ನ್ಯಾಯಾಲಯವು ಈ ಆರೋಪಿಗಳ ಶಿಕ್ಷೆಯ ಪ್ರಮಾಣವನ್ನು ಸೆ.16ರಂದು ಪ್ರಕಟಿಸಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.






