ರಾಜಕೀಯ

ಕಾರ್ಕಳ ಶಾಸಕ ಸುನಿಲ್ ಕುಮಾ‌ರ್ ವಿರುದ್ಧ ಜಾಲತಾಣಗಳಲ್ಲಿ ಪ್ರಚೋದನಾಕಾರಿ ವೀಡಿಯೋ ಪೋಸ್ಟ್: ಆರೋಪಿ ಅರೆಸ್ಟ್

Views: 76

ಕನ್ನಡ ಕರಾವಳಿ ಸುದ್ದಿ: ಕಾರ್ಕಳ ಶಾಸಕ ಸುನಿಲ್ ಕುಮಾ‌ರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ವೀಡಿಯೋ ಪೋಸ್ಟ್ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪ್ರಸಾದ್ ಶೆಟ್ಟಿ ಎಂದು ಗುರುತಿಸಲಾಗಿದೆ. ಸೆ. 12 ರಂದು ದೂರುದಾರ ವಿಘಶ್ ಪ್ರಸಾದ್ ರಾವ್ ಅವರು ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ್ನು ನೋಡುತ್ತಿದ್ದ ವೇಳೆ ಪ್ರಸಾದ್ ಶೆಟ್ಟಿ ಎಂಬುವವರ ಫೇಸ್ ಬುಕ್ ಖಾತೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾ‌ರ್ ಅವರ ತಲೆ ಕತ್ತರಿಸಿರುವ ಫೋಟೋ ಹಾಕಿ ಎಡಿಟ್ ಮಾಡಿ ಪ್ರಚೋದನಾಕಾರಿ ವೀಡಿಯೋವೊಂದನ್ನು ಪೋಸ್ಟ್ ಮಾಡಿರುವುದು ಕಂಡುಬಂದಿದೆ.

ಆರೋಪಿಯು ಸಾರ್ವಜನಿಕರಿಗೆ ಪ್ರಚೋದನೆ ನೀಡುವ ಉದ್ದೇಶದಿಂದ ವಿಡಿಯೋ ಸೃಷ್ಠಿಸಿ ಅವಾಚ್ಯ ಶಬ್ದದಿಂದ ಬೈದು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಮಾಡುವ ರೀತಿ ಪೋಸ್ಟ್ ಹಾಕಿರುವುದನ್ನು ಖಂಡಿಸಿ ವಿಫೇಶ್ ಪ್ರಸಾದ್ ರಾವ್ ದೂರು ನೀಡಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಇದೀಗ ಆರೋಪಿಯಾದ ಪ್ರಸಾದ್ ಶೆಟ್ಟಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button
error: Content is protected !!