ಇತರೆ
ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವದಂಪತಿ ಸ್ಥಳದಲ್ಲೇ ಸಾವು
Views: 28
ಕನ್ನಡ ಕರಾವಳಿ ಸುದ್ದಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದವರು.
ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






