ಶಿಕ್ಷಣ

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ – ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ ಸಮಿತ್ ಶೆಟ್ಟಿ ಆಯ್ಕೆ

Views: 3

ನ್ನಡ ಕರಾವಳಿ ಸುದ್ದಿ:  ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೆ. 12ರಂದು ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ 10ನೇ ತರಗತಿಯ ವಿದ್ಯಾರ್ಥಿ ಸಮಿತ್ ಶೆಟ್ಟಿ ಅವರು 110 ಕೆ.ಜಿ. ವಿಭಾಗದ 17ರ ವಯೋಮಾನದ ಬಾಲಕರ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ತಮ್ಮ ಶಕ್ತಿ, ಕೌಶಲ್ಯ ಹಾಗೂ ಆತ್ಮವಿಶ್ವಾಸದ ಅದ್ಭುತ ಪ್ರದರ್ಶನದ ಮೂಲಕ ಎದುರಾಳಿಗಳನ್ನು ಮಣಿಸಿದ ಸಮಿತ್ ಶೆಟ್ಟಿ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಅಲಂಕರಿಸುವುದರೊಂದಿಗೆ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಸಮಿತ್ ಶೆಟ್ಟಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

Related Articles

Back to top button
error: Content is protected !!