ಯುವಜನ

ಭೀಕರ ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ: ಅಂಗಾಂಗ ದಾನಕ್ಕೆ ಮುಂದಾದ ಪೋಷಕರು

Views: 10

ಕನ್ನಡ ಕರಾವಳಿ ಸುದ್ದಿ: ಬೈಕ್‌ ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು,ವೈದ್ಯರ ಸಲಹೆಯಂತೆ ಪೋಷಕರು ಯುವಕನ ಅಂಗಾಂಗ ದಾನ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಕುತ್ತಾರು ಆಯೆರೆ ಬೆಟ್ಟು ನಿವಾಸಿ ಗೋಪಾಲ ಹಾಗೂ ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಅಪಘಾತದಲ್ಲಿ ಗಾಯಗೊಂಡ ಯುವಕ.

ವರ್ಷಿತ್‌ ಕುತ್ತಾರಿನಿಂದ ತನ್ನ ಮನೆಯ ಕಡೆ ತೆರಳುತ್ತಿದ್ದಾಗ ಕುತ್ತಾರುವಿನ ಆಟೋ ವರ್ಕ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟ‌ರ್ ಮತ್ತು ವರ್ಷಿತ್ ನ ಬೈಕ್‌ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕಿನಿಂದ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದ ವರ್ಷಿತ್‌ನನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಯೆನೆಪೋಯ ಆಸ್ಪತ್ರೆಯ ವೈದ್ಯರು ವರ್ಷಿತ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದ್ದಾರೆ.

ವರ್ಷಿತ್ ನ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡಲಾಗುತ್ತಿದೆ. ವರ್ಷಿತ್ ನ ಪೋಷಕರು ಮಗನ ಅಂಗಾಗ ದಾನ ಪ್ರಕ್ರಿಯೆಗೆ ಮುಂದಾಗಿದ್ದಾರೆ. ವರ್ಷಿತ್ ನ ಕಿಡ್ನಿ, ಯಕೃತ್ತು, ಹೃದಯ, ಶ್ವಾಸಕೋಶಕ್ಕೆ ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಬೇಡಿಕೆ ಬಂದಿದ್ದು, ಇಂದೇ ಝೀರೋ ಟ್ರಾಫಿಕ್ ಮೂಲಕ ಅಂಗಾಗಗಳ ರವಾನೆ ಪ್ರಕ್ರಿಯೆ ನಡೆಸಲಾಗುತ್ತದೆಯೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

 

Related Articles

Back to top button
error: Content is protected !!