ಶಿಕ್ಷಣ

ಕಾಳಾವರದಲ್ಲಿ ಕೋಟೇಶ್ವರ ವೃತ್ತ ಮಟ್ಟದ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಕ್ರೀಡೆಯಲ್ಲಿ ಸೋಲು–ಗೆಲುವುಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸುವುದು ಮುಖ್ಯ-----ಶಾಸಕ ಕಿರಣ್ ಕುಮಾರ್ ಕೊಡ್ಗಿ

Views: 16

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ವಲಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಳಾವರದ ಆಶ್ರಯದಲ್ಲಿ ಕೋಟೇಶ್ವರ ವೃತ್ತ ಮಟ್ಟದ 14 ಹಾಗೂ 17ರ ವಯೋಮಾನದ ಬಾಲಕ–ಬಾಲಕಿಯರ ಕ್ರೀಡಾಕೂಟವು ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆರಂಭಗೊಂಡಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡೆಯಲ್ಲಿ ಸೋಲು–ಗೆಲುವುಗಳನ್ನು ಸಮಾನ ಮನೋಭಾವದಿಂದ ಸ್ವೀಕರಿಸುವುದು ಮುಖ್ಯ. ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಿವೃತ್ತ ಉಪನ್ಯಾಸಕ ಪ್ರೊಫೆಸರ್ ಶಂಕರ್ ರಾವ್ ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ತಿಳಿಸಿದರು.

ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶೋಭಾ ಎಸ್ ಶೆಟ್ಟಿಯವರು ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡಾಕೂಟವನ್ನು ಉತ್ತಮವಾಗಿ ಸಂಘಟಿಸಿದ್ದಕ್ಕೆ ಅಭಿನಂದನೆಯನ್ನು ಸಲ್ಲಿಸಿದರು.

ಶ್ರೀ ಕಾಳಿಂಗ ಸುಬ್ರಹ್ಮಣ್ಯ ಹಾಗೂ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶಾನಾಡಿ ಚಂದ್ರಶೇಖರ್ ಹೆಗ್ಡೆ ಅವರು ಧ್ವಜಾರೋಹಣ ನೆರವೇರಿಸಿದರು.

ಹಳೆ ವಿದ್ಯಾರ್ಥಿ ಸಂಘ ಹಾಗೂ ನೇತಾಜಿ ಯುವಕ ಮಂಡಲದ ಅಧ್ಯಕ್ಷರಾದ ಭರತ್ ಕುಮಾರ್ ಶೆಟ್ಟಿ ಅವರು ಕ್ರೀಡಾ ಜ್ಯೋತಿ ಬೆಳಗಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಮಲ್ಯಾಡಿ ಸದಾರಾಮ ಶೆಟ್ಟಿ, ದಿನಕರ ಹೆಗ್ಡೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ. ರಂಜಿತ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಮುಸರತ್ ಜಹಾನ್ ಅಕ್ಬರ್ ಎಂ, ಉಡುಪಿ ಜಿಲ್ಲಾ ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕುಂದಾಪುರ ತಾಲೂಕು ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಉದಯ್ ಮಡಿವಾಳ, ಕಾಳಾವರದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಕೋಟೇಶ್ವರ ವೃತ್ತದ ಬಿ.ಆರ್.ಪಿ. ಶಂಕರ ಕುಲಾಲ್, ಕೋಟೇಶ್ವರ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಾ, ಸರಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ, ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ದೀಪಾ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ವಸಂತಿ ಎಚ್. ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ್ ಬೀಜಾಡಿ ಹಾಗೂ ಸಹ ಶಿಕ್ಷಕ ಉಳ್ತೂರು ಉದಯ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಕ್ವಾಡಿ ಬಾಲಕೃಷ್ಣ ಶೆಟ್ಟಿ ವಂದಿಸಿದರು.

 

Related Articles

Back to top button
error: Content is protected !!